ರಾಮ ಮಂದಿರ ನಿರ್ಮಾಣಕ್ಕೆ ಜನಾರ್ಧನ ಪೂಜಾರಿ ಬೆಂಬಲ : ವಿಹೆಚ್‌ಪಿ ಸ್ವಾಗತ

ಮಂಗಳೂರು, ಡಿಸೆಂಬರ್ 07 : ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ನೀಡಿರುವ ಹೇಳಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಅವರು ಪ್ರಪಂಚದ ಕೋಟ್ಯಂತರ ಹಿಂದೂಗಳ ಆರಾಧ್ಯ ದೇವರಾದ ಶ್ರೀರಾಮಚಂದ್ರನಿಗೆ ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣವಾಗಬೇಕೆಂದು ಇಡೀ ದೇಶದ ಜನತೆ ಆಗ್ರಹ ಮಾಡುತ್ತಿದ್ದಾರೆ.

ಶ್ರೀರಾಮನ ಭವ್ಯ ಮಂದಿರ ನಿರ್ಮಾಣವು ಭಾರತ ದೇಶದ ಸ್ವಾಭಿಮಾನದ ಸಂಕೇತವಾಗಿದ್ದು ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರ ಕೂಡ ಹೌದು.

ಈ ಬಗ್ಗೆ ಹಿರಿಯರಾದ ಬಿ ಜನಾರ್ಧನ ಪೂಜಾರಿಯವರು ಶ್ರೀ ರಾಮನ ಜನ್ಮಸ್ಥಾನದಲ್ಲಿ ಮಂದಿರ ನಿರ್ಮಾಣವಾಗಬೇಕೆಂದು ನೀಡಿದ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ಅದೇ ಸಂದರ್ಭದಲ್ಲಿ ಈ ಬಗ್ಗೆ ವಿರೋಧವಾಗಿ ಸಾಮಾಜಿಕ ಜಾಲತಾಣದಲ್ಲಿ ಬಿ ಜನಾರ್ಧನ ಪೂಜಾರಿಯವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಅವರನ್ನು ಎನ್ ಕೌಂಟರ್ ಮಾಡಿ ಕೊಲೆಮಾಡಬೇಕೆಂದು ಬೆದರಿಕೆ ಒಡ್ಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ.

ಇದು ಒಂದು ಜಿಹಾದಿ ಮಾನಸಿಕತೆ ಇರುವ ಒಂದು ತಂಡದ ಕೃತ್ಯವಾಗಿದ್ದು ಇದರ ಹಿಂದೆ ದೇಶದ್ರೋಹಿ ಸಂಘಟನೆಗಳ ಕೈವಾಡ ಸ್ಪಷ್ಟವಾಗಿ ಕಾಣುತ್ತಿದೆ.

ಆದ್ದರಿಂದ ಪೊಲೀಸ್ ಅಧಿಕಾರಿಗಳು ಈ ದುಷ್ಕರ್ಮಿಯ ಬಗ್ಗೆ ತನಿಖೆ ನಡೆಸಿ ಇದರ ಹಿಂದೆ ಇರುವ ತಂಡದವನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Facebook Comments

comments