ಮುಂಬೈ ಸೆಪ್ಟೆಂಬರ್ 23: ಬಾಲಿವುಡ್ ಸ್ಟಾರ್ ದಂಪತಿ ಕತ್ರಿಕಾ ಕೈಫ್ ಮತ್ತು ವಿಕ್ಕಿ ಕೌಶಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಒಂದು ಹಾಕಿದ್ದರು. ಮೂಲಕ ತಾವು ತಾಯಿ ಆಗಲಿರುವ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ.


ನಟ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು 2021 ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಸುಮಾರು 4 ವರ್ಷವಾದರೂ ದಂಪತಿ ಯಾವುದೇ ಶುಭಸುದ್ದಿ ನೀಡಿರಲ್ಲಿಲ್ಲ. ಇತ್ತೀಚೆಗೆ ನಟಿ ಕತ್ರಿನಾ ಕೈಫ್ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದರು. ಸಂತಾನ ಭಾಗ್ಯಕ್ಕಾಗಿ ಅವರು ವಿಶೇಷ ಪೂಜೆ ಮಾಡಿಸಿದ್ದರು ಎನ್ನಲಾಗಿತ್ತು. ಅದರಂತೆ ಈಗ ಕತ್ರಿನಾ ಕೈಫ್ ಗರ್ಭಿಣಿ ಆಗಿದ್ದು, ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ತಮ್ಮ ಹಾಗೂ ಪತಿ ವಿಕ್ಕಿ ಕೌಶಲ್ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕತ್ರಿನಾ ಕೈಫ್, ‘ನಮ್ಮ ಜೀವನದ ಅತ್ಯುತ್ತಮ ಅಧ್ಯಾಯಯದ ಆರಂಭದಲ್ಲಿ ನಾವಿದ್ದೇವೆ. ಈ ಸಮಯದಲ್ಲಿ ನಮ್ಮ ಹೃದಯ ಪ್ರೀತಿ ಮತ್ತು ಕೃತಜ್ಞತೆಯಿಂದ ತುಂಬಿದೆ’ ಎಂದು ಕತ್ರಿನಾ ಬರೆದುಕೊಂಡಿದ್ದಾರೆ.

Share Information