Connect with us

    LATEST NEWS

    ವೈರಲ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ರಸ್ತೆ ರಿಪೇರಿ ಕೆಲಸ

    ವೈರಲ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ರಸ್ತೆ ರಿಪೇರಿ ಕೆಲಸ

    ಮಂಗಳೂರು ಫೆಬ್ರವರಿ 23: ಮಂಗಳೂರು ಟ್ರಾಫಿಕ್ ಪೊಲೀಸ್ ಒಬ್ಬರು ಕಾಂಕ್ರೀಟ್ ರಸ್ತೆಯ ಕಬ್ಬಿಣ ಪಟ್ಟಿಯನ್ನು ರಿಪೇರಿ ಮಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಖತ್ ವೈರಲ್ ಆಗಿದ್ದು, ಫೆಸ್ಬುಕ್ ನಲ್ಲಿ ತುಳುನಾಡಿನ ಜನತೆಯ ಪರವಾಗಿ ಧನ್ಯವಾದಗಳನ್ನು ಹೇಳಲಾಗಿದೆ.

    ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಟ್ರಾಫಿಕ್ ಪೊಲೀಸ್ ಕರ್ತವ್ಯ ನಿರ್ವಹಿಸುತ್ತಿರುವ ಇವರ ಹೆಸರು ರೇವಣ ಸಿದ್ದಪ್ಪ, ನಗರದ ಪ್ರಮುಖ ರಸ್ತೆ, ಅತಿ ಹೆಚ್ಚು ಟ್ರಾಫಿಕ್ ಇರುವ ರಸ್ತೆ ಇದಾಗಿದ್ದು, ಕಾಂಕ್ರಿಟ್ ರಸ್ತೆಯ ಕಬ್ಬಿಣದ ಪಟ್ಟಿಯೊಂದು ಮೇಲೆದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ತೊಂದರೆ ಕೊಡುತ್ತಿತ್ತು, ಈ ಬಗ್ಗೆ ಹಲವಾರು ಬಾರಿ ಮಂಗಳೂರು ಮಹಾನಗರಪಾಲಿಕೆಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿರಲಿಲ್ಲ.

    ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ರೇವಣ ಸಿದ್ದಪ್ಪ ದ್ವಿಚಕ್ರ ವಾಹನ ಸವಾರರ ಕಷ್ಟವನ್ನು ಕಂಡು ತಾವೇ ರಸ್ತೆಯಿಂದ ಮೇಲ್ಲೆದ್ದ ಕಬ್ಬಿಣದ ಪಟ್ಟಿಯನ್ನು ಸರಿಪಡಿಸಲು ಶ್ರಮಿಸಿದರು, ರಸ್ತೆಯ ಮೇಲೆದ್ದ ಕಬ್ಬಿಣದ ಪಟ್ಟಿಯನ್ನು ಸರಿಪಡಿಸಿದ ರೇವಣ ಸಿದ್ದಪ್ಪ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೆ ಕಬ್ಬಿಣದ ಪಟ್ಟಿಯಿಂದಾಗಿ ಮುಂದಾಗುವ ಅನಾಹುತ ತಪ್ಪಿಸಿದ್ದಾರೆ.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply