LATEST NEWS
ಅಪ್ರಾಪ್ತ ಯುವಕರ ಕಾರಿನ ಸ್ಟಂಟ್ ಗೆ ಮಹಿಳೆ ಸಾವು – ಬಾಲಕಿ ಸ್ಥಿತಿ ಗಂಭೀರ
ಉತ್ತರಪ್ರದೇಶ ಅಗಸ್ಟ್ 03: ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರಣ ಮಹಿಳೆ ಸಾವನಪ್ಪಿ ಸ್ಕೂಟಿಯಲ್ಲಿದ್ದ ಆಕೆಯ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ.
ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್ ಮಾಡುತ್ತಾ ವೇಗವಾಗಿ ಚಲಾಯಿಸಿಕೊಂಡು ಬಂದ ಪರಿಣಾಮ, ಕಾರು ನಿಯಂತ್ರಣ ತಪ್ಪಿ ಎದುರಿಗೆ ಬಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ತಾಯಿ ಹಾಗೂ ಮಗು 30 ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ.
ಶುಕ್ರವಾರ ಮಧ್ಯಾಹ್ನ ಕಾನ್ಪುರದ ಕಿದ್ವಾಯಿ ನಗರದಲ್ಲಿ ಈ ನಡೆದಿರುವುದಾಗಿ ವರದಿಯಾಗಿದೆ. ಕಾರು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದಾಗ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ನಂತರ, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಚಾಲಕ ಮತ್ತು ಇತರ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಂಡರು. ಸ್ಥಳೀಯರು ತಕ್ಷಣ ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. 1ಆದರೆ ಮಹಿಳೆ ಅದಾಗಲೇ ಸಾವನ್ನಪ್ಪಿದ್ದು, ಬಾಲಕಿಗೆ ತೀವ್ರ ಗಾಯಗಳಾಗಿವೆ. ಹೆಲ್ಮೆಟ್ ಧರಿಸಿದ್ದರೂ ಡಿಕ್ಕಿಯ ರಭಸಕ್ಕೆ ಮಹಿಳೆಯ ತಲೆಗೆ ಗಾಯವಾಗಿದ್ದು,ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಿದ್ವಾಯಿ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಪ್ರಾಪ್ತ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ
You must be logged in to post a comment Login