Connect with us

LATEST NEWS

ಪೌರಾಣಿಕ ಬೇಡ ಅಂತ ಚಾರಿತ್ರಿಕ ನಾಟಕ ಮಾಡಿದ್ರೆ ನವೀನ್ ಸೂರಿಂಜೆ ಕೆಲಸ ತೆಗೆದುಕೊಂಡ್ರು

ಮಂಗಳೂರು ಮಾರ್ಚ್ 05: “ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ. ಶಿವಾಜಿಯ ಸಂಪೂರ್ಣ ಕಥೆ ತಿಳಿದುಕೊಂಡರೆ ಅವರೆಂತಹ ಅನ್ಯಧರ್ಮ ಸಹಿಷ್ಣು ಎನ್ನುವುದು ತಿಳಿಯುತ್ತದೆ. ಶಿವಾಜಿಯ ಬಗ್ಗೆ ತಿಳಿಯದವರು ನಮ್ಮ ಮುಂದಿನ ಚಾರಿತ್ರಿಕ ನಾಟಕ “ಶಿವಾಜಿ”ಯನ್ನು ನೋಡಬೇಕು. ಅವರ ಶಿವಾಜಿ ಬಗೆಗಿನ ಅಭಿಪ್ರಾಯ ಬದಲಾಗುತ್ತದೆ“ ಎಂದು ಹಿರಿಯ ರಂಗಕರ್ಮ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.


”ಶಿವಾಜಿ ನಾಟಕ ಮಾರ್ಚ್ 6 ರಂದು ಗುರುವಾರ ಕಟೀಲು ಕ್ಷೇತ್ರದಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ. ಮಾಚ್೯ 13 ರಂದು ಪುರಭವನದಲ್ಲಿ ಪ್ರದರ್ಶನ ಕಾಣಲಿದೆ. ನಾಟಕದ ಟೈಟಲ್ ಹಾಡು ಕನ್ನಡ ಭಾಷೆಯಲ್ಲಿದ್ದರೆ ತುಳುವಿನಲ್ಲಿ ಸಂಭಾಷಣೆ ಇರಲಿದೆ. ಹಿಂದಿ ಭಾಷೆಯನ್ನು ಕೂಡ ಬಳಕೆ ಮಾಡುವ ಮೂಲಕ ಭಾಷಾ ಸಾಮರಸ್ಯಕ್ಕೆ ಒತ್ತು ನೀಡಲಾಗಿದೆ. ಕಥೆ ರಚನೆಕಾರ ಶಶಿರಾಜ್ ರಾವ್ ಕಾವೂರು ತುಂಬಾ ಕಷ್ಟಪಟ್ಟು ಕಥೆ ರಚಿಸಿದ್ದಾರೆ. ಒಟ್ಟು 3 ಹಾಡುಗಳಿದ್ದು ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಟೈಟಲ್ ಸಾಂಗ್ ಹೆಸರಾಂತ ಗಾಯಕ ಕೈಲಾಶ್ ಖೇರ್ ಹಾಡಬೇಕಿತ್ತು ಆದರೆ ಅವರು 25 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರಿಂದ ಕೈಬಿಡಬೇಕಾಯಿತು. ಬೇರೆ ಪ್ರಸಿದ್ಧ ಗಾಯಕರಿಂದ ಹಾಡಿಸಲು ಪ್ರಯತ್ನ ಮುಂದುವರಿದಿದೆ“ ಎಂದರು.


”ಪ್ರೀತೇಶ್ ಬಳ್ಳಾಲ್ ಬಾಗ್ ಇತ್ತೀಚಿನ 70 ಶೋಗಳಲ್ಲಿ ಶಿವದೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದು ಶಿವಾಜಿ ಪಾತ್ರದಲ್ಲೂ ಅವರೇ ಇರಲಿದ್ದಾರೆ. ಪ್ರಮೋದ್ ಮರವಂತೆ, ಶಶಿರಾಜ್ ಕಾವೂರು ಸಾಹಿತ್ಯ ಬರೆದಿದ್ದಾರೆ. ಶಿವಾಜಿ ಪಾತ್ರಕ್ಕೆ ನಟ ಪೃಥ್ವಿ ಅಂಬರ್ ಕಂಠದಾನ ಮಾಡಿದ್ದರೆ ಗುರು ದಾದಾಜಿ ಪಾತ್ರಕ್ಕೆ ನವೀನ್ ಡಿ ಪಡೀಲ್ ಧ್ವನಿ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್ ಹಾಡಿದ್ದು ಹಾಡುಗಳು ಸೊಗಸಾಗಿ ಮೂಡಿಬಂದಿದೆ“ ಎಂದರು.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *