KARNATAKA
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ನ ಉಪಾಧ್ಯಕ್ಷ ಹೃದಯಾಘಾತಕ್ಕೆ ಬಲಿ
ಬೆಂಗಳೂರು ನವೆಂಬರ್ 30: ಹೃದಯಾಘಾತ ಇದೀಗ ದೇಶದಲ್ಲಿ ಸಮಸ್ಯೆಯಾಗಿ ಕಾಡಲಾರಂಭಿಸಿದ್ದು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಮಂಗಳವಾರ ತಡರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ವಾಹನ ಉದ್ಯಮದಲ್ಲಿ ಭಾರತದ ದಿಗ್ಗಜರಲ್ಲಿ ಒಬ್ಬರಾದ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಕುಸಿದು ಬಿದ್ದರು. ಆ ತಕ್ಷಣವೇ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಮಂಗಳವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ದೃಢಪಡಿಸಿದೆ.