LATEST NEWS
ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ರ

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ರ
ಉಡುಪಿ ಎಪ್ರಿಲ್ 23: ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಇಂದು ಸಲ್ಲಿಸಿದರು. ಚುನಾವಣಾಧಿಕಾರಿ ಕುಮುದಾ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ವಿನಯ್ ಕುಮಾರ್ ಸೊರಕೆ ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ದೇವಸ್ಥಾನ, ಚರ್ಚ್ , ಮಸೀದಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ಕದ್ರಿ ಮಂಜುನಾಥೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಮೊದಲು ಪೂಜೆ ಸಲ್ಲಿಸಿದ ವಿನಯ್ ಕುಮಾರ್ ಸೊರಕೆ ಯವರು ಪಡುಬಿದ್ರಿ ನಾಗ ಬ್ರಹ್ಮ ಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಅನಂತರ ಕಾಪು ಪೊಲಿಪು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿನ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಿದರು. ಅನಂತರ ಉದ್ಯಾವರ ಚರ್ಚ್ ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಉಡುಪಿ ಬಿಷಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ವಿನಯ್ ಕುಮಾರ್ ಸೊರಕೆ ಈ ಬಾರಿ ಕರಾವಳಿಯಲ್ಲಿ ಚುನಾವಣಾ ಪ್ರಚಾರಕ್ಕೆ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬೂತ್ ಮಟ್ಟದಲ್ಲಿ ಹೆಚ್ಚಿನ ಒತ್ತುಕೊಟ್ಟು ಚುನಾವಣಾ ಪ್ರಚಾರ ಮಾಡಲಾಗುವುದು ಎಂದು ಅವರು ಈ ಸಂದರ್ಭ ಹೇಳಿದ್ದಾರೆ. ಅಲ್ಲದೇ ಕ್ಷೇತ್ರದ ಅಲ್ಲಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಆಯೋಜನೆ ಮಾಡಲಾಗುವುದು ಎಂದು ಅವರು ತಿಳಿಸಿದರು.