LATEST NEWS
ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಸಚಿನ್ ತೆಂಡೂಲ್ಕರ್ ಆಪ್ತ ಗೆಳೆಯ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ – ವಿಡಿಯೋ ವೈರಲ್
ಮುಂಬೈ ಅಗಸ್ಟ್ 06: ಸರಿಯಾಗಿ ನಡೆಯಲು ಆಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಸ್ಥಿತಿ ತಲುಪಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ವಿನೋದ್ ಕಾಂಬ್ಳಿ ಸ್ಥಿತಿ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
ವಿನೋದ್ ಕಾಂಬ್ಳಿ ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಬ್ಬರೂ ಬಾಲ್ಯದ ಗೆಳೆಯರು. ಶಾಲಾ ಕ್ರಿಕೆಟ್, ದೇಶಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಅನ್ನು ಜೊತೆಯಾಗಿ ಆರಂಭಿಸಿದ್ದ ಇವರಿಬ್ಬರೂ ಅದ್ಭುತ ಆರಂಭ ಪಡೆದಿದ್ದರು.ವಿನೋದ್ ಕಾಂಬ್ಳಿ ಕಾರಣಾಂತರಗಳಿಂದ ತಮ್ಮ ವೃತ್ತಿ ಜೀವನದಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ.
ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕಾಂಬ್ಳಿ ಅವರ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿನೋದ್ ಕಾಂಬ್ಳಿ ಅವರು ನಡೆಯಲು ಸಾಧ್ಯವಾಗದ ಪರದಾಡುತ್ತಿದ್ದಾರೆ. ಅಲ್ಲದೆ ನಡೆಯಲಾಗದೆ ಬೈಕ್‌ನ ಸಹಾಯದಿಂದ ನಿಂತು ಕೊಳ್ಳಲು ಪ್ರಯತ್ನಿಸಿದರೂ ಅವರಿಂದ ಸಾಧ್ಯವಾಗಲಿಲ್ಲ. ಇದನ್ನು ಗಮನಿಸಿದ ಕೆಲವರು, ಅವರ ಎರಡೂ ಕೈಗಳನ್ನು ಹಿಡಿದು ನಡೆಯಲು ಸಹಾಯ ಮಾಡಿದರು.
ಇದೀಗ ವೈರಲ್ ಆಗಿರುವ ವಿಡಿಯೋವನ್ನು ನೋಡಿದ ನೆಟ್ಟಿಗರು, ವಿನೋದ್ ಕಾಂಬ್ಳಿ ಅವರು ಕಂಠಪೂರ್ತಿ ಕುಡಿದು ಸಾರ್ವಜನಿಕವಾಗಿ ಈ ರೀತಿ ಕಾಣಿಸಿಕೊಂಡಿದ್ದಾರೆಂದು ಕೆಲವರು ಆರೋಪ ಮಾಡಿದರೆ, ಇನ್ನು ಕೆಲವರು ಮಾಜಿ ಕ್ರಿಕೆಟಿಗ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದಲೇ ಅವರು ನಡೆಯಾಗದೆ ಪರದಾಡುತ್ತಿದ್ದಾರೆ. ಅವರ ಆರೋಗ್ಯ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.