ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

ಮಂಗಳೂರು ಏಪ್ರಿಲ್ 17 : ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕೆ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಪುತ್ತೂರಿನ ಉಜ್ರುಪಾದೆ ಬಲ್ನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಸುಳ್ಯದ ಬಡ್ಯಡ್ಕದ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೆಳ್ತಂಗಡಿಯ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಕೇಂದ್ರಗಳು ಅತ್ಯಾಕರ್ಷಕವಾಗಿ ಮೂಡಿ ಬಂದಿದೆ.