Connect with us

LATEST NEWS

ಕ್ವಾರಂಟೈನ್ ನಿಯಮ ಉಲ್ಲಂಘನೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ ಉಲ್ಲಂಘಿಸಿ ಹೊರಗೆ ತಿರುಗಾಡು ತ್ತಿದ್ದಾರೆ ಎಂಬ ದೂರು ಬಂದಿತ್ತು. ದೂರಿನ ಅನ್ವಯ ಕುಂದಾಪುರ ಸಹಾಯಕ ಕಮಿಷನರ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ.

ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯ ಮೇಲೆ ತಕ್ಷಣ ಎಫ್ ಐಆರ್ ಧಾಖಲಿಸಲು ಸೂಚಿಸಿದ್ದು ಗ್ರಾಮದ ಪಿಡಿಓ ಕುಂದಾಪುರ ಗ್ರಾಮಾಂತರ ಪೊಲೀಸ್ ರಾಣಿ ಯಲ್ಲಿ ಪ್ರಕರಣ ಧಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.