LATEST NEWS
ಮಂಗಳೂರು ನಗರಕ್ಕೆ ಹಬ್ಬಿದ ಮಾರಕಾಸ್ತ್ರಗಳಿಂದ ದಾಳಿ ಪ್ರಕರಣ

ಮಂಗಳೂರು ನಗರಕ್ಕೆ ಹಬ್ಬಿದ ಮಾರಕಾಸ್ತ್ರಗಳಿಂದ ದಾಳಿ ಪ್ರಕರಣ
ಮಂಗಳೂರು ಜನವರಿ 3: ಮಂಗಳೂರು ನಗರದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಒಂದೆಡೆ ಸುರತ್ಕಲ್ ನಲ್ಲಿ ಮುದಾಸ್ಸಿರ್ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮುದಾಸ್ಸಿರ್ ಗಂಭೀರವಾಗಿ ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ಕೊಟ್ಟಾರ ಚೌಕಿಯಲ್ಲಿ ಕೂಡ ಚೂರಿ ಇರಿತ ಪ್ರಕರಣ ನಡೆದಿದೆ. ಅಬ್ದುಲ್ ಬಶೀರ್ ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಚೂರಿಯಿಂದ ಇರಿದಿದ್ದಾರೆ. ಘಟನೆಯಲ್ಲಿ ಅಬ್ದುಲ್ ಬಶೀರ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಲಾಗಿದ್ದು , ಎಡಿಜಿಪಿ ಕಮಲ್ ಪಂತ್ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ನಾಳೆ ದೀಪಕ್ ರಾವ್ ಅವರ ಮೃತ ದೇಹದ ಮೆರವಣಿಗೆ ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಈ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಕ್ಟ್ ಕಲಂ 35 ರನ್ವಯ ನಿರ್ಬಂಧಕಾಜ್ಞೆ ಜಾರಿ ಮಾಡಲಾಗಿದೆ.