ಅರಣ್ಯಾಧಿಕಾರಿಗಳಿಗೆ ಮೂಡಿಗೆರೆ ಬಿಜೆಪಿ ಶಾಸಕನ ಅವಾಜ್ ವಿಡಿಯೋ ವೈರಲ್

ಚಿಕ್ಕಮಗಳೂರು ಫೆಬ್ರವರಿ 19: ಹುಲಿ ಉಗುರು ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಆರೋಪಿಗಳನ್ನು ಬಂಧಿಸಿದ್ದಕ್ಕೆ ಅಧಿಕಾರಿಗಳ ಮೇಲೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಗೂಂಡಾವರ್ತನೆ ತೋರಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿಕ್ಕಮಗಳೂರಿನಲ್ಲಿ ಅರಣ್ಯ ಅಧಿಕಾರಿಗಳು ಹುಲಿ ಉಗುರು ಮಾರಾಟ ಮಾಡುತ್ತಿದ್ದ ವೆಂಕಟೇಶ್, ರಂಜಿತ್ ಹಾಗೂ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇದರಿಂದ ಕೋಪಗೊಂಡು ತನ್ನ ಹಿಂಬಾಲಕರನ್ನ ಬಂಧಿಸಿದಕ್ಕೆ ಶಾಸಕ ಎಂ.ಪಿ ಕುಮಾರಸ್ವಾಮಿ ಅರಣ್ಯ ಅಧಿಕಾರಿಗಳ ವಿರುದ್ದ ಕಿಡಿಕಾರಿದ್ದಾರೆ.

ರಂಪಾಟ ಮಾಡಿಬಿಡುತ್ತೇನೆ. ನನಗೆ ಏನು ಸಮಸ್ಯೆ ಆಗಲ್ಲ. ನನ್ನ ಫೋನ್ ರಿಸೀವ್ ಮಾಡದೇ ಇದ್ದರೆ ಆಫೀಸ್ ಬಾಗಿಲು ಹಾಕಿಸುತ್ತೇನೆ ಎಂದು ಮೂಡಿಗೆರೆ ಅರಣ್ಯ ಇಲಾಖೆ ಕಚೇರಿಯಲ್ಲಿ ಕುಮಾರಸ್ವಾಮಿ ರಂಪಾಟ ಮಾಡಿ ಕಿರುಚಾಟ ಮಾಡಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಈಗ ಹರಿದಾಡುತ್ತಿದ್ದು, ಎಂ.ಪಿ.ಕುಮಾರಸ್ವಾಮಿ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ಕೇಳಿ ಬರುತ್ತಿದೆ.

VIDEO