KARNATAKA
ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ ಸೌಜನ್ಯ ಪ್ರಕರಣದ ಕುರಿತಂತೆ ಯೂಟ್ಯೂಬರ್ ಮಾಡಿದ ವಿಡಿಯೋ – ಪೊಲೀಸ್ ಇಲಾಖೆ ಹೈ ಅಲರ್ಟ್

ಬೆಂಗಳೂರು ಮಾರ್ಚ್ 06: ಸದ್ಯ ರಾಜ್ಯದಲ್ಲಿ ಯೂಟ್ಯೂಬ್ ವಿಡಿಯೋ ಒಂದು ಸಂಚಲನ ಸೃಷ್ಠಿಸಿದೆ. ಕೇವಲ ಒಂದು ವಾರದೊಳಗೆ ಆ ವಿಡಿಯೋ ಕೋಟಿಗಟ್ಟಲೇ ವೀಕ್ಷಣೆ ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಪಾರ್ವಡ್ ಕೂಡ ಆಗುತ್ತಿದೆ.

ಬೆಳ್ತಂಗಡಿಯಲ್ಲಿ ನಡೆದ ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಬಾತ ಮಾಡಿರುವ ತನಿಖಾ ವರದಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ನಲ್ಲಿದೆ. ಸೌಜನ್ಯ ಪ್ರಕರಣ ಸೇರಿದಂತೆ ಬೆಳ್ತಂಗಡಿ ಪರಿಸರದಲ್ಲಿ ನಡೆದ ವಿವಿಧ ಪ್ರಕರಣಗಳನ್ನು ಅತ್ಯುತ್ತಮವಾಗಿ ಎಐ ಬಳಿಸಿಕೊಂಡು ಪ್ರಸ್ತುತ ಪಡಿಸಿರುವ ಸಮೀರ್, ಅವರ ವಿಡಿಯೋ ಕೋಟಿಗಟ್ಟಲೇ ವೀವ್ಸ್ ಪಡೆದುಕೊಂಡಿದೆ. ಈ ನಡುವೆ ಈ ವಿಡಿಯೋಗೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಚರ್ಚೆಗಳು ಪ್ರಾರಂಭವಾದ ಹಿನ್ನಲೆ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ರಾಜ್ಯಾದ್ಯಂತ ನಿಗಾ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ ಎಂದು ಹೇಳಲಾಗಿದ್ದು. ಈ ಕುರಿತಂತೆ ಆದೇಶದ ಪ್ರತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ಇತ್ತೀಚಿಗೆ ಸಮೀರ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ಮಾಡಿದ್ದು, ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ, ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ, ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್ ಗಳನ್ನು ಚುರುಕುಗೊಳಿಸುವಂತೆ ಸೂಚಿಸಲಾಗಿದೆ. ಅದೇ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಕುರಿತು ನಿಗಾ ಇಟ್ಟು ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಲಾಗಿದೆ. ಈ ಆದೇಶದ ಪ್ರತಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನೂ ತಿಳಿಸಿಲ್ಲ.