Connect with us

FILM

ವೇದಿಕೆ ಮೇಲೆ ಹಠಾತ್ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ತಮಿಳು ನಟ ವಿಶಾಲ್

ಚೆನ್ನೈ ಮೇ 12: ಇತ್ತೀಚೆಗಷ್ಟೇ ತಮ್ಮ ಅನಾರೋಗ್ಯದಿಂದ ಸುದ್ದಿಯಾಗಿದ್ದ ತಮಿಳು ನಟ ವಿಶಾಲ್ ಮತ್ತೆ ಇದೀಗ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್‌ಗೆ ಅತಿಥಿಯಾಗಿ ತೆರಳಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ.


ಕಾರ್ಯಕ್ರಮದ ವೇಳೆ ವಿಶಾಲ್ ಹಠಾತ್ತನೆ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಮಾಜಿ ಸಚಿವ ಕೆ. ಪೊನ್ಮುಡಿ ಹಾಗೂ ಕಾರ್ಯಕ್ರಮ ಆಯೋಜಕರು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ. ವಿಶಾಲ್ ಅವರ ಮ್ಯಾನೇಜರ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಊಟ ಮಾಡದ ಕಾರಣ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದಿದ್ದಾರೆ.

Share Information
Continue Reading
Advertisement
2 Comments

2 Comments

    Leave a Reply

    Your email address will not be published. Required fields are marked *