BANTWAL
ವಿಟ್ಲ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ವಿಟ್ಲ, ಆಗಸ್ಟ್ 17: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ.
ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ. ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ. ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಈತ ಸದಸ್ಯನಾಗಿ ಸೇವೆ ಮಾಡುತ್ತಿದ್ದ.
ಕೌಟುಂಬಿಕ ಕಲಹ ಪ್ರಶಾಂತ್ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.