DAKSHINA KANNADA
ವಿಟ್ಲ – ಆಕ್ಸಿಡೆಂಟ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ – ಪೋಲೀಸರಿಂದ ಲಘು ಲಾಠಿ ಚಾರ್ಚ್
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಎಂಬಲ್ಲಿ ನಡೆದಿದೆ.
ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಕಲ್ಲಡ್ಕ ಕಡೆಗೆ ಬರುತ್ತಿದ್ದ ಶಿಪ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ಬಗ್ಗೆ ಎರಡು ಕಾರಿಗೆ ಸಂಬಂಧಪಟ್ಟವರ ನಡುವೆ ವಾದವಿವಾದ ನಡೆದು ಮಾತಿನ ಚಕಮಕಿ ನಡೆದಿದೆ.
ಬಳಿಕ ಇತ್ತಂಡದವರು ಪರಸ್ಪರ ಹಲ್ಲೆಗೆ ಮುಂದಾಗಿದ್ದರು, ಇದೇ ವೇಳೆ ಸ್ಥಳದಲ್ಲಿ ನೂರಾರು ಜನ ಜಮಾಯಿಸಿ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆ ಬಗ್ಗೆ ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.