Connect with us

    DAKSHINA KANNADA

    ವಿಟ್ಲ – ನೇಣಿಗೆ ಶರಣಾದ 8ನೇ ತರಗತಿ ವಿಧ್ಯಾರ್ಥಿ ಹೇಮಂತ್

    ವಿಟ್ಲ ಜನವರಿ 8:8ನೇ ತರಗತಿ ಕಲಿಯುತ್ತಿರುವ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡ ಎಂಬವರ ಪುತ್ರ ಹೇಮಂತ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

    ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಮನೆಯಲ್ಲಿದ್ದ ಹಳೆಯ ಬಟ್ಟೆಯನ್ನು ಕುಣಿಕೆ ರೀತಿ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಪ್ರತಿಭಾವಂತ ವಿಧ್ಯಾರ್ಥಿಯಾಗಿರುವ ಹೇಮಂತ್, ಪರೀಕ್ಷೆ ಹಿನ್ನಲೆ ಮನೆಯಲ್ಲೇ ಓದುತ್ತಿದ್ದ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply