BANTWAL
ವಿಟ್ಲ – ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು…!!

ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್ 26ರ ಸೋಮವಾರ ರಾತ್ರಿ ಮಾಣಿಲ ಗ್ರಾಮದ ಬಾವಲಿಮೂಲೆಗೆ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
