DAKSHINA KANNADA
ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಮಗ ಸಾವು ಅಪ್ಪ ಗಂಭೀರ
ವಿಟ್ಲ ಫೆಬ್ರವರಿ 25: ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ.
ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ ಇಸ್ಮಾಯಿಲ್ (21) ಎಂದು ಗುರುತಿಸಲಾಗಿದೆ.
ಇಸ್ಮಾಯಿಲ್ ಹಾಗೂ ಅವರ ತಂದೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪದ ಬದನಾಜೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಅವರ ತಂದೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.