ವಿಟ್ಲ ಫೆಬ್ರವರಿ 16: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬವೇ ಮುರಿದುಬಿದ್ದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸೋಮವಾರ ನಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೆ, ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿದ್ಯುತ್ ಕಂಬ ಮುರಿದುಬಿದ್ದ ಪರಿಣಾಮ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗಳು ರಸ್ತೆಗೆ ಬಿದ್ದಿದ್ದು, ಈ ವೇಳೆ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.