ವಿಟ್ಲ ಡಿಸೆಂಬರ್ 31: ವಿಟ್ಲ ಪೇಟೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿಗೆ ಇಡೀ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಬೆಂಕಿ ಸುತ್ತಮುತ್ತಲಿನ ಅಂಗಡಿಗಳಿಗೂ ಹಬ್ಬಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.


ಸಂತೋಷ್ ಕುಮಾರ್ ಕೊಡಂಗೆ ಮಾಲಕತ್ವದ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಿಯಂತ್ರಣಕ್ಕೆ ಬಾರದ ಸ್ಥಿತಿಗೆ ತಲುಪಿದೆ. ಬೆಂಕಿ ಅಮಿತ್ ಹೋಟೇಲ್ ಹಾಗೂ ಸ್ಟಾರ್ ವೈನ್ಸ್ ವರೆಗೂ ಹಬ್ಬಿದ್ದು, ಇದರ ನಡುವೆ ಇದ್ದ ಎಸ್. ಬಿ. ಟೈಲರಿಂಗ್ ಶಾಪ್, ಪಡೀಲ್ ಫಾಸ್ಟ್ ಫುಡ್ ಸಹಿತ ಸಣ್ಣ ಅಂಗಡಿಗಳೂ ಬೆಂಕಿಗೆ ಆಹುತಿಯಾಗಿದೆ. ಬಂಟ್ವಾಳದಿಂದ ಅಗ್ನಿಶಾಮಕ ವಾಹನ ಬಂದಿದ್ದು, ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ. ಈ ಘಟನೆಯ ಪರಿಣಾಮವಾಗಿ ಭಾರೀ ನಷ್ಟ ಸಂಭವಿಸಿದೆ.

Share Information