ವಿಟ್ಲ ಡಿಸೆಂಬರ್ 01: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ ರಸ್ತೆಗೆ ಉರುಳಿದೆ. ಘಟನೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.