DAKSHINA KANNADA
ಮೊಬೈಲ್‍ನಿಂದ ವಿಟ್ಲದ ಪೊಲೀಸ್ ಸಿಬ್ಬಂದಿಗೆ ಬಂತಾ ಕೊರೊನಾ….?
ಮೊಬೈಲ್‍ನಿಂದ ವಿಟ್ಲದ ಪೊಲೀಸ್ ಸಿಬ್ಬಂದಿಗೆ ಬಂತಾ ಕೊರೊನಾ….?
ಮಂಗಳೂರು: ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಾಖಲಾದ ಒಂದು ಪ್ರಕರಣ ಸದ್ಯ ಕುತೂಹಲ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದೆ.
ಮೇ 14ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಕ್ವಾರಂಟೈನ್ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ ಸೋಂಕಿತ ಠಾಣೆಗೆ ಹೋಗಿದ್ದ. ಆತನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಇಂದು 42 ವರ್ಷದ ಹೆಡ್ ಕಾನ್‍ಸ್ಟೇಬಲ್ ಅವರಿಗೆ ಪಾಸಿಟಿವ್ ಬಂದಿದೆ.
ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ ಕ್ವಾರಂಟೈನ್ ನಲ್ಲಿದ್ದು ಮೇ 18 ರಂದು ಪಾಸಿಟಿವ್ ಬಂದಿತ್ತು. ಕ್ವಾರಂಟೈನ್ ಆಗುವುದಕ್ಕೆ ಮೊದಲು ಠಾಣೆಗೆ ಹೋಗಿದ್ದರಿಂದ ಸೋಂಕು ಬಂದಿದೆ. ಮುಂಬೈ ವ್ಯಕ್ತಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನ ಸಂಪರ್ಕಕ್ಕೆ ಬಂದಿದ್ದರಿಂದ ಮೂರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಈ ಪೈಕಿ ಓರ್ವ ಸಿಬ್ಬಂದಿಗೆ ಸೋಂಕು ಇರುವುದು ದೃಢಪಟ್ಟಿದೆ.
ಆದರೆ ಪೊಲೀಸ್ ಸಿಬ್ಬಂದಿಯ ಕೊರೊನಾ ಸೊಂಕಿನ ಮೂಲ ಮಾತ್ರ ಸದ್ಯ ಕುತೂಹಲ ಮೂಡಿಸಿದೆ. ಸೋಂಕಿತ ಪೊಲೀಸ್ ಸಿಬ್ಬಂದಿ ಮುಂಬೈ ವ್ಯಕ್ತಿಯ ಜೊತೆ ಯಾವುದೇ ನೇರ ಸಂಪರ್ಕ ಹೊಂದಿರಲಿಲ್ಲ. ಮೇ 14 ರಂದು ಮುಂಬೈ ವ್ಯಕ್ತಿ ಠಾಣೆಗೆ ಬಂದಾಗ ಪೇದೆಯೊಬ್ಬರು ಆಧಾರ್ ಕಾರ್ಡ್ ಮತ್ತು ಮೊಬೈಲ್ ಪಡೆದುಕೊಂಡಿದ್ದಾರೆ. ನಂತರ ಈ ಪೇದೆ ಮೊಬೈಲ್ ಹೆಡ್ ಕಾನ್‍ಸ್ಟೇಬಲ್ ಅವರಿಗೆ ನೀಡಿದ್ದಾರೆ. ಆ ಮೊಬೈಲನ್ನು ಹೆಡ್ ಕಾನ್ ಸ್ಟೇಬಲ್ ಬಳಸಿದ್ದಾರೆ. ಅಚ್ಚರಿಯ ಸಂಗತಿ ಏನೆಂದರ ಸೋಂಕಿತನಿಂದ ನೇರವಾಗಿ ಮೊಬೈಲ್ ಮತ್ತು ಆಧಾರ್ ಕಾರ್ಡ್ ಪಡೆದಿದ್ದ ಪೊಲೀಸ್ ಸಿಬ್ಬಂದಿಯ ಫಲಿತಾಂಶ ನೆಗೆಟಿವ್ ಬಂದಿದೆ.