Connect with us

    DAKSHINA KANNADA

    10ನೇ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರೀತಿಸಲು ಒತ್ತಾಯಿಸಿದ್ದ ಅನ್ಯಕೋಮಿನ ಯುವಕನ ಮೇಲೆ ಪ್ರಕರಣ ದಾಖಲು

    ವಿಟ್ಲ ಮೇ 05: ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಹತ್ತನೆ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು. ಯುವಕನ ಮೇಲೆ ಬಾಲಕಿಯ ಮನೆಯವರು ಪ್ರಕರಣ ದಾಖಲಿಸಿದ್ದಾರೆ.


    ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಎಂಬವರ ಪುತ್ರಿ ಆತ್ಮೀಕಾ (14) ಎಂಬಾಕೆ ಕಣಿಯೂರು ಎಂಬಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು . ಕನ್ಯಾನ ಗ್ರಾಮದ ಹಮೀದ್(30) ಆತ್ಮಹತ್ಯೆಗೆ ಕಾರಣ ಎಂದು ಅವನ ಮೇಲೆ ಸಂಜೀವ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕನ್ಯಾನ ಗ್ರಾಮದ ಕಣಿಯೂರಿನಲ್ಲಿ ಮಸೀದಿ ಹಿಂಬಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸಂಜೀವ ಅವರ ಕುಟುಂಬ ವಾಸವಾಗಿದ್ದು, ಮನೆಯಲ್ಲಿ ತಂದೆತಾಯಿ ಇಲ್ಲದ ಸಂದರ್ಭ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇತ್ತೀಚೆಗೆ ಬಾಲಕಿ ಆತ್ಮೀಕಾ ಮೊಬೈಲ್ ನಲ್ಲಿ ಹೆಚ್ಚಾಗಿ ಮಾತನಾಡುತ್ತಿರುವುದನ್ನು ಗಮನಿಸಿ ತಂದೆ ವಿಚಾರಿಸಿದಾಗ ಕಣಿಯೂರು ತಲೆಕ್ಕಿ ನಿವಾಸಿಯಾದ ಸಾಹುಲ್ ಹಮೀದ್ ಯಾನೆ ಕುಟ್ಟ ಜೊತೆ ಮಾತನಾಡುತ್ತಿರುವುದು ತಿಳಿದು ಬಂದಿದೆ. ಈ ಹಿನ್ನಲೆ ತಂದೆ ಮಗಳ ಮೊಬೈಲ್ ನ್ನು ತೆಗೆದಿರಿಸಿ ಆಕೆಗೆ ಬುದ್ಧಿವಾದ ಹೇಳಿದ್ದರು. ಸಾಹುಲ್ ಹಮೀದ್ ಹಾಗೂ ಆತನ ಅಣ್ಣನನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಆತನಿಗೆ ಮಗಳ ಸಹವಾಸಕ್ಕೆ ಬರಬೇಡ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಸಾಹುಲ್ ಹಮೀದ್ ಪದೇ ಪದೇ ಯಾರೂ ಇಲ್ಲದ ಸಮಯ ಆಕೆಯ ಮನೆಗೆ ಬಂದು ಆಕೆಯನ್ನು ಭೇಟಿಯಾಗಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನೀನು ನಿನ್ನ ತಂದೆ – ತಾಯಿಯನ್ನು ಬಿಟ್ಟು ನನ್ನೊಂದಿಗೆ ಬಾ. ನೀನು ಬರುವುದಿಲ್ಲವಾದರೆ ಸಾಯಿ ಎಂದು ಸಾಹುಲ್ ಹಮೀದ ಯಾನೆ ಕುಟ್ಟ ಹೇಳಿರುವುದನ್ನು ಮಗಳು ಆತ್ಮಿಕ ತಂದೆ ಹಾಗೂ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದವರೆಂದು ತಿಳಿದಿದ್ದರೂ, ಬಾಲಕಿಯ ಮನಸ್ಸು ಕೆಡಿಸಿ ಪ್ರೀತಿಸುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಈ ಕೃತ್ಯ ಎಸೆಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply