Connect with us

    LATEST NEWS

    ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಂಸೆ ಪಡೆದ ಕಂಬಳ ಗದ್ದೆ ಚಿರತೆ ಶ್ರೀನಿವಾಸ ಗೌಡ 

    ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಂಸೆ ಪಡೆದ ಕಂಬಳ ಗದ್ದೆ ಚಿರತೆ ಶ್ರೀನಿವಾಸ ಗೌಡ 

    ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

    ” ಕಂಬಳ ಸ್ಪರ್ಧೆಯ ವೇಳೆ ಅಪರೂಪದ ಸಾಧನೆ ಮಾಡಿ, ಉಸೇನ್ ಬೋಲ್ಟ್ ನೊಂದಿಗೆ ಹೋಲಿಸಲ್ಪಡುತ್ತಿರುವ ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು, ಅವರ ಪೂರ್ಣ ಸಾಮರ್ಥ್ಯದ ಸಾಕಾರಕ್ಕಾಗಿ ಅದನ್ನು ತಿಳಿಯುವ, ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ ಅಗತ್ಯವಿದೆ ” ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

    ಅಲ್ಲದೆ ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಶ್ರೀ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

    ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ (ಕಂಬಳ ಕೋಣಗಳ ಟ್ರ್ಯಾಕ್) ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply