LATEST NEWS
ಮತದಾನ ಜಾಗೃತಿಗಾಗಿ ಯಕ್ಷಗಾನ ಪಾತ್ರಧಾರಿಗಳಾದ ಐಎಎಸ್ ಐಪಿಎಸ್ ಅಧಿಕಾರಿಗಳು…!!
ಉಡುಪಿ ಎಪ್ರಿಲ್ 09: ಲೋಕಸಭೆ ಚುನಾವಣೆಗೆ ಮತದಾನಕ್ಕೆ ದಿನ ಹತ್ತಿರ ಬರುತ್ತಿದ್ದಂತೆ ಇದೀಗ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯ ಐಎಎಸ್ ಕೆಎಎಸ್ ಐಪಿಎಸ್ ಅಧಿಕಾರಿಗಳು ಯಕ್ಷಗಾನದ ವೇಷ ತೊಟ್ಟ ಮತದಾನ ಜಾಗೃತಿಗಾಗಿ ವಿಡಿಯೋ ಒಂದನ್ನು ಮಾಡಿದ್ದಾರೆ. ಸದ್ಯ ಅಧಿಕಾರಿಗಳ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿ ಜಿ. ಪಂ. ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತರಾದ ರಶ್ಮಿ, ಕರಾವಳಿ ಕಾವಲು ಪಡೆ ಪೊಲಿಸ್ ಅಧೀಕ್ಷಕ ಮಿಥುನ್ ಅವರು ಬಡಗುತಿಟ್ಟು ಯಕ್ಷಗಾನ ಶೈಲಿ ವೇಷಭೂಷಣ ಧರಿಸಿ ಜಿಲ್ಲೆ ಯ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶೇ.100 ಮತದಾನಕ್ಕೆ, ಮತದಾನದ ಮಹತ್ವವನ್ನು ಸಾರಿ ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವಂತೆ ಕರೆ ನೀಡಿದ್ದಾರೆ.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮತಜಾಗೃತಿಗಾಗಿ ಸ್ವೀಪ್ ಸಮಿತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಾಜ್ಯದಲ್ಲೆ ವಿಶೇಷ ಎಂಬಂತೆ ಜಿಲ್ಲೆಯ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ಯಕ್ಷಗಾನ ವೇಷಧರಿಸಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದಾರೆ.