Connect with us

    LATEST NEWS

    ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಮತದಾನಕ್ಕೆ ಒಲವು ತೋರದ ನಗರವಾಸಿಗಳು

    ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಮತದಾನಕ್ಕೆ ಒಲವು ತೋರದ ನಗರವಾಸಿಗಳು

    ಮಂಗಳೂರು ನವೆಂಬರ್ 13: ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಶೇಕಡ 59.67 ರಷ್ಟು ಮತದಾನವಾಗಿದ್ದು, ಕಳೆದ ಅವಧಿಗೆ ಹೊಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲಿ ಭಾರಿ ಕಡಿಮೆಯಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಒಟ್ಟು 3,94,894 ಮತದಾರರಲ್ಲಿ 1,13,084 ಪುರುಷರು, ಮತ್ತು 1,22,527 ಮಹಿಳೆಯರು ಸೇರಿ ಒಟ್ಟು 2,35,628 ಮಂದಿ ಮತ ಚಲಾಯಿಸಿದ್ದಾರೆ.

    ಬೆಳಗ್ಗೆ 7 ಗಂಟೆಗೆ ನೀರಸವಾಗಿ ಪ್ರಾರಂಭವಾದ ಮತದಾನ ಬಹುತೇಕ ಕೇಂದ್ರಗಳಲ್ಲಿ ಮಂದಗತಿಯಲ್ಲಿತ್ತು. ಮಧ್ಯಾಹ್ನದ ವೇಳೆಗೆ ಶೇ. 39ರಷ್ಟು ಮತದಾನ ನಡೆದಿತ್ತು. ಕಳೆದ ಅವಧಿಗೆ ಹೋಲಿಸಿದರೆ ಈ ಬಾರಿ ಮತದಾನ ಪ್ರಮಾಣ ಕಡಿಮೆಯಿತ್ತು.

    ಕಾಂಗ್ರೆಸ್‌ನಿಂದ 60, ಬಿಜೆಪಿಯಿಂದ 60, ಜೆಡಿಎಸ್‌ 12, ಸಿಪಿಎಂ 7, ಸಿಪಿಐ 1, ಎಸ್‌ಡಿಪಿಐ 6, ಜೆಡಿಯು 2, ಡಬ್ಲೂಪಿಐ 3, ಕರ್ನಾಟಕ ರಾಷ್ಟ್ರ ಸಮಿತಿ 2 ಹಾಗೂ ಪಕ್ಷೇತರರು 27 ಸೇರಿ ಒಟ್ಟು 180 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

    ಈಗಾಗಲೇ ಮತಯಂತ್ರಗಳನ್ನು ನಗರದ ಸ್ಟೇಟ್‌ ಬ್ಯಾಂಕ್‌ ರೊಸಾರಿಯೋ ಹೈಸ್ಕೂಲ್‌ನಲ್ಲಿರುವ ಡಿಮಸ್ಟರಿಂಗ್‌ ಕೇಂದ್ರದ ಸ್ಟ್ರಾಂಗ್‌ರೂಂ ನಲ್ಲಿಡಲಾಗಿದೆ. ನಾಳೆ 14ರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದ್ದು, ಮಧ್ಯಾಹ್ನ 1 ಗಂಟೆಯ ವೇಳೆ ಪೂರ್ಣ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *