LATEST NEWS
ತೆಲಂಗಾಣ – ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10ನೇ ತರಗತಿ ವಿಧ್ಯಾರ್ಥಿನಿಗೆ ಹಾರ್ಟ್ ಅಟ್ಯಾಕ್

ಹೈದರಾಬಾದ್ ಫೆಬ್ರವರಿ 21: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ಮೃತರನ್ನು ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ ಗ್ರಾಮದ 16 ವರ್ಷದ ಶ್ರೀ ನಿಧಿ ಎಂದು ಗುರುತಿಸಲಾಗಿದೆ. ಈಕೆ ಕಾಮರೆಡ್ಡಿಯಲ್ಲಿ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಕಲಿಯುತ್ತಿದ್ದಳು. ಶಾಲೆಗೆ ಎಂದಿನಂತೆ ಬರುತ್ತಿರುವ ವೇಳೆ ಏಕಾಏಕಿ ಶಾಲೆಯ ಬಳಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ.

ಈ ವೇಳೆ ಶಾಲಾ ಶಿಕ್ಷಕರೊಬ್ಬರು ಆಕೆಯನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಸಿಪಿಆರ್ ಸೇರಿದಂತೆ ಆರಂಭಿಕ ಚಿಕಿತ್ಸೆ ನೀಡಿದರು, ಆದರೆ ಆಕೆ ಪ್ರತಿಕ್ರಿಯಿಸದಿದ್ದಾಗ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಆಕೆ ಸಾವನಪ್ಪಿದ್ದಳು. ಒಟ್ಟಾರೆ ಯುವ ಜನತೆ ಹೃದಯಾಘಾತದಿಂದ ಸಾವನಪ್ಪುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕಾಯಗುತ್ತಲೇ ಇದೆ.