Connect with us

LATEST NEWS

ಮಂಗಳೂರು ಉಗ್ರ ಪರ ಗೋಡೆ ಬರಹ – ಎನ್ ಐಎ ಗೆ ವಹಿಸಲು ವಿಎಚ್ ಪಿ ಆಗ್ರಹ

ಮಂಗಳೂರು ಡಿಸೆಂಬರ್ 13: ಮಂಗಳೂರಿನ ಹೃದಯಭಾಗದಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನು ಎನ್ ಐಎ ಗೆ ವಹಿಸಲು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.  ಈ ಕುರಿತಂತೆ ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಮಂಗಳೂರಿನ ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಭಂದಿಸಿದಂತೆ ತೀರ್ಥಹಳ್ಳಿಯ ಮಾಜ್ಸ್ ಮುನೀರ್ ಅಹಮದ್ ಮತ್ತು ಮಹಮದ್ ಶರೀಕ್ ಸಹಿತ ಮೂರು ಜನ ಶಂಕಿತ ಉಗ್ರರನ್ನು ಬಂಧಿಸಿದ ಕೆಲಸ ಶ್ಲಾಘನೀಯವಾಗಿದ್ದು, ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.


ಈ ಪ್ರಕರಣಕ್ಕೆ ಸಂಭಂದಿಸಿದಂತೆ ಬಂಧಿತರಿಂದ ಐಸಿಸ್ ಉಗ್ರಗಾಮಿ ಸಂಘಟನೆಗಳ ಕುಖ್ಯಾತ ಕೆಲವು ವ್ಯಕ್ತಿಗಳ ವಿಡಿಯೋ ಮತ್ತು ಜಾಗತಿಕ ಭಯೋತ್ಫಾದಕ ಜಮೈಕಾ ಮೂಲದ ಶೇಕ್ ಅಬ್ದುಲ್ಲಾ ಫೈಝಲ್ ಪ್ರಚೋದನಕಾರಿ ಭಾಷಣ ಮತ್ತು ಉಗ್ರರ ಅಧ್ಯಯನಕ್ಕೆ ಸಂಬಂಧಿಸಿದಂತೆ ಪುಸ್ತಕಗಳು ಸಿಕ್ಕಿರುವುದು ಬಹಳ ಆತಂಕಕಾರಿ ವಿಷಯ. ಇವರ ಹಿಂದೆ ವ್ಯವಸ್ಥಿತ ಜಾಲ ಕೆಲಸ ಮಾಡುತ್ತಿದ್ದು ಇನ್ನಷ್ಟು ವ್ಯಕ್ತಿಗಳು ಇದರ ಹಿಂದೆ ಕೆಲಸಮಾಡುತ್ತಿದ್ದಾರೆ ಎಂದು ಸ್ಪಷ್ಟವಾಗಿ ಗೋಚರವಾಗುತ್ತಿದ್ದು,


NIA ತನಿಖೆಗೆ ಒಳಪಡಿಸಿದರೆ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಮತ್ತು ವ್ಯಕ್ತಿಗಳನ್ನು ಭೇದಿಸಲು ಸಾಧ್ಯವಾಗುತ್ತದೆ. ಆದುದರಿಂದ ಈ ಪ್ರಕರಣವನ್ನು NIA ತನಿಖೆಗೆ ನೀಡಲು ಮಂಗಳೂರು ಪೊಲೀಸ್ ಕಮಿಷನರ್ ಶಿಫಾರಸು ಮಾಡಬೇಕೆಂದು ಈ ಮೂಲಕ ಆಗ್ರಹ ಮಾಡುತ್ತಿದ್ದೇನೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *