Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ಪುಣ್ಯಸ್ನಾನಕ್ಕೆ ನೀರಿನ ಬರ

    ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ಪುಣ್ಯಸ್ನಾನಕ್ಕೆ ನೀರಿನ ಬರ

    ಮಂಗಳೂರು ಮೇ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೀರಿನ ಬರ ದೇವಸ್ಥಾನಗಳಿಗೂ ತಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಸಂಪೂರ್ಣ ಇಳಿಮುಖವಾಗಿದೆ. ಇದರಿಂದಾಗಿ ಈ ನದಿಗಳ ತಟದಲ್ಲಿರುವ ಪುಣ್ಯಕ್ಷೇತ್ರ ಗಳಲ್ಲಿ ನೀರಿನ ಕೊರತೆ ಎದುರಾಗಿದೆ.

    ದಕ್ಷಿಣಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದ ಸ್ನಾನಘಟ್ಟದಲ್ಲಿ ಇದೀಗ ನೀರಿನ ಸಮಸ್ಯೆ ಎದುರಾಗಿದೆ. ನದಿಯಲ್ಲಿ ಹರಿಯುವ ನೀರು ಕೊಳಚೆಯಾಗಿದ್ದು, ಭಕ್ತಾಧಿಗಳು ಈ ನೀರಿನಲ್ಲೇ ತಮ್ಮ ಪುಣ್ಯಸ್ನಾನ ನೆರವೇರಿಸಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply