ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಉಂಟಾಗಿದೆ – ಡಾ. ಡಿ. ವಿರೇಂದ್ರ ಹೆಗ್ಗಡೆ ಅಸಮಧಾನ

ಮಂಗಳೂರು ಮೇ 18: ವಿವಿಧ ಯೋಜನೆಗಳ ಹೆಸರಲ್ಲಿ ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶ ಉಂಟಾಗುತ್ತಿರುವುದರಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಉಂಟಾಗಿರುವ ತೀವ್ರ ನೀರಿನ ಅಭಾವದ ಹಿನ್ನಲೆಯಲ್ಲಿ ಧರ್ಮಸ್ಥಳಕ್ಕೆ ಭಕ್ತಾಧಿಗಳು ಬರುವುದನ್ನು ಸ್ವಲ್ಪ ದಿನಕ್ಕೆ ಮುಂದೂಡಲು ಧರ್ಮಾಧಿಕಾರಿಗಳು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಪತ್ರಿಕಾಗೋಷ್ಠಿ ಮಾತನಾಡಿದ ಅವರು
ಇನ್ನು 15 ದಿನಗಳ ಒಳಗೆ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಸದ್ಯ ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದ್ದು ಅದನ್ನೇ ಅವಲಂಭಿಸಿಲಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.

ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ. ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ.

ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೂ ತಟ್ಟಿದ ನೀರಿನ ಅಭಾವದ ಬಿಸಿ
ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದರು.

VIDEO