ವಯನಾಡ್ ಅಗಸ್ಟ್ 25 : ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಕಾರ್ಮಿಕರು ಸಾವನಪ್ಪಿದ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ.

ದೀಪು ಟೀ ಟ್ರೇಡಿಂಗ್ ಕಂಪನಿಗೆ ಸೇರಿದ 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಜೀಪ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 30 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ.ಜೀಪ್ ನಲ್ಲಿದ್ದ ಆರು ಮಹಿಳೆಯರು ಸೇರಿದಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಯನಾಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದೆ.