Connect with us

KARNATAKA

ವಯನಾಡು ದುರಂತ ಕೇರಳದಲ್ಲಿ 2 ದಿನ ಶೋಕಾಚರಣೆಗೆ CM ಪಿಣರಾಯಿ ಆದೇಶ

ತಿರುವನಂತಪುರ: ಕೇರಳದ ವಯನಾಡಿನ  ಮೆಪ್ಪಾಡಿಯಲ್ಲಿ 90 ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದ ಭೀಕರ ಭೂಕುಸಿತ ದುರಂತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆಗೆ  ಸಿಎಂ ಪಿಣರಾಯಿ ವಿಜಯನ್ ಮಂಗಳವಾರ ಆದೇಶಿಸಿದ್ದಾರೆ.

ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೂ 93 ಜನ ಮೃತಪಟ್ಟಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ದುರಂತಕ್ಕೆ ತೀವ್ರ ಕಂಬನಿ ಮಿಡಿದಿರುವ ಮುಖ್ಯಮಂತ್ರಿ, ‘ದುರಂತದಲ್ಲಿ ಹಲವರು ತಮ್ಮವರನ್ನು, ಮನೆ ಹಾಗೂ ಆಸ್ತಿಪಾಸ್ತಿಯನ್ನು ಕಳೆದುಕೊಂಡಿದ್ದಾರೆ. ಇದೊಂದು ದೊಡ್ಡ ದುರಂತ’ ಎಂದಿದ್ದಾರೆ. ಶೋಕಾಚರಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿರುವ ಮುಖ್ಯ ಕಾರ್ಯದರ್ಶಿ ವಿ. ವೇಣು, ‘ಜುಲೈ 30 ಹಾಗೂ 31ರಂದು ರಾಜ್ಯದಲ್ಲಿ ಶೋಕಾಚರಣೆ ಜಾರಿಯಲ್ಲಿರುತ್ತದೆ. ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಬೇಕು. ಸಾರ್ವಜನಿಕ ಸಭೆ ಹಾಗೂ ಸಮಾರಂಭಗಳನ್ನು ರದ್ದುಪಡಿಸಲಾಗಿದೆ’ ಎಂದಿದ್ದಾರೆ.

ಕೇರಳಕ್ಕೆ 5 ಕೋಟಿಯ ನೆರವು ನೀಡಿದ ತಮಿಳುನಾಡು:

ಕೇರಳದ ದುರಂತದ ಬಗ್ಗೆ ಅಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಮೆಪ್ಪಾಡಿ ದುರಂತದ ತಕ್ಷಣದ ಪರಿಹಾರ ಕಾರ್ಯಾಚರಣೆಗೆ ₹5 ಕೋಟಿ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗೆ  ಸೂಚಿಸಿದ್ದಾರೆ.  ಕೇರಳದ ಜೊತೆ ನಾವೂ ಇದ್ದೇವೆ ಜೊತೆಗೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಇಂದು ಬೆಳಿಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ಸ್ಟಾಲಿನ್, ಘಟನಾ ಸ್ಥಳಕ್ಕೆ ನಮ್ಮ ರಾಜ್ಯದಿಂದ ತುರ್ತು ರಕ್ಷಣಾ ಪಡೆಯನ್ನು ಕಳುಹಿಸಿ ಕೊಡಲಾಗುವುದು ಅಲ್ಲದೇ ಅಗತ್ಯ ಸಹಕಾರನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

 ಕೇರಳಕ್ಕೆ ಸಹಾಯ ಹಸ್ತ ಚಾಚಿದ ಕರ್ನಾಟಕ ಸರ್ಕಾರ:

‘ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೇರಳ ದುರಂತಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ತಿಳಿಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *