LATEST NEWS
ನಾವು ಭಯೋತ್ಪಾದನೆಯನ್ನು ಬೆಂಬಲಿಸಿದ್ದೇವೆ – ಒಪ್ಪಿಕೊಂಡ ಪಾಕಿಸ್ತಾನ

ಲಂಡನ್, ಏಪ್ರಿಲ್ 25: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನರಮೇಧ ಮಾಡಿದ ಬೆನ್ನಲ್ಲೇ ನಾವು ಭಯೋತ್ಪಾದನಾ ಸಂಘಟನೆಯನ್ನು ಬೆಂಬಲಿಸಿದ್ದೇವೆ ಎಂದು ಪಾಕಿಸ್ತಾನ ಅಧಿಕೃತವಾಗಿ ಹೇಳಿದೆ.
ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸುವುದು ಮತ್ತು ಬೆಂಬಲಿಸುವುದು ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಭಾಗಿಯಾಗಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಸ್ಕೈ ನ್ಯೂಸ್ ಪ್ರಶ್ನೆಗೆ, ನಾವು ಸುಮಾರು 3 ದಶಕಗಳಿಂದ ಅಮೆರಿಕ ಮತ್ತು ಬ್ರಿಟನ್ ಸೇರಿದಂತೆ ಪಶ್ಚಿಮ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. ನಾವು ತಪ್ಪು ಮಾಡಿದ್ದೇವೆ. ಈ ಕೆಲಸದಿಂದ ನಾವು ಸಂಕಷ್ಟ ಅನುಭವಿಸಿದ್ದೇವೆ. ನಾವು ಸೋವಿಯತ್ ಒಕ್ಕೂಟದ ವಿರುದ್ಧದ ಯುದ್ಧದಲ್ಲಿ ಮತ್ತು ನಂತರ 9/11 ರ ನಂತರದ ಯುದ್ಧದಲ್ಲಿ ಸೇರದಿದ್ದರೆ ಪಾಕಿಸ್ತಾನದ ಮೇಲೆ ಈ ಆರೋಪ ಬರುತ್ತಿರಲಿಲ್ಲ ಎಂದು ತಿಳಿಸಿದರು. ಅಷ್ಟೇ ಅಲ್ಲದೇ ಪಹಲ್ಗಾಮ್ ಘಟನೆಯ ನಂತರ ಭಾರತದೊಂದಿಗೆ ಸಂಪೂರ್ಣ ಯುದ್ಧ ನಡೆಸುವ ಸಾಧ್ಯತೆಯಿದೆ. ಭಾರತದ ಪ್ರತಿಕ್ರಿಯೆ ಸರಿಯಾದ ಪ್ರತಿಕ್ರಿಯೆಯನ್ನು ನಾವು ನೀಡುತ್ತೇವೆ ಎಂದು ಆಸಿಫ್ ತಿಳಿಸಿದರು.