ಚಿಕ್ಕಮಗಳೂರು: ಹುಲಿ ಉಗುರು ಇರುವ ಆಭರಣ ಧರಿಸಿದ್ದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸದ ಅರಣ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕಳಸದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಆಲ್ದೂರು ಮೂಲದ ದರ್ಶನ್ ಎಂಬವರೇ ಅಮಾನತು ಆದ ಅಧಿಕಾರಿಯಾಗಿದ್ದಾರೆ.

ದರ್ಶನ್ ಅವರು ಧರಿಸಿರುವ ಆಭರಣದಲ್ಲಿ ಹುಲಿ ಉಗುರು ಇದ್ದು, ಈ ಅಧಿಕಾರಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆಲ್ದೂರು ಹೋಬಳಿ ವ್ಯಾಪ್ತಿಯ ಅರೇನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ಆಲ್ದೂರು ವಲಯದ ಅರಣ್ಯಾಧಿಕಾರಿಗೆ ದೂರು ನೀಡಿದ್ದರು.

ಇದೀಗ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪ ಡಿ.ಎಫ್.ಓ. ನಂದೀಶ್ ಅವರು ಡಿಆರ್ ಎಫ್‍ಒ ದರ್ಶನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share Information