DAKSHINA KANNADA
ಲಾಕ್ ಡೌನ್ ನಿಯಮ ಉಲ್ಲಂಘಿಸಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ: ಕೇಸ್ ದಾಖಲು

ಮಂಗಳೂರು, ಮೇ 05: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ (ಮಂಗಳವಾರ) ರಾತ್ರಿ ಮದುವೆ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಸಂಬಂಧ ಮಹಾನಗರ ಪಾಲಿಕೆ ವತಿಯಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೆ, ಅನುಮತಿ ಪಡೆದದ್ದಕ್ಕಿಂತ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಸೇರಿದ್ದರು.

ಈ ಬಗ್ಗೆ ಸ್ಥಳೀಯರ ದೂರಿನ ಮೇರೆಗೆ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅನುಮತಿಯ ನಿಬಂಧನೆಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.