KARNATAKA
ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ….!!
ಬೆಂಗಳೂರು ಡಿಸೆಂಬರ್ 04: ಓಮಿಕ್ರಾನ್ ಆತಂಕದ ನಡುವೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನಲೆ ರಾಜ್ಯ ಸರಕಾರ ಬೆಂಗಳೂರಿಗೆ ಮಾತ್ರ ಕೆಲ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಸೇರಿದಂತೆ ಬೆಂಗಳೂರಿನಲ್ಲಿ 1 ರಿಂದ 9 ರವರೆಗಿನ ಆಪ್ ಲೈನ್ ತರಗತಿಯನ್ನು ರದ್ದುಗೊಳಿಸಿದೆ.
ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಮಾಹಿತಿ ನೀಡಿ ಸಚಿವ ಅಶೋಕ್ ಬೆಂಗಳೂರಿಗೆ ಕಠಿಣ ಕ್ರಮದ ಅವಶ್ಯಕತೆ ಇದೆ. ಈಗ ಬೆಂಗಳೂರು ಒಂದರಲ್ಲೇ ಶೇಕಡ 85ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10 ಮತ್ತು 12ನೇ ತರಗತಿ ಹೊರತು ಪಡಿಸಿ ಉಳಿದ ಎಲ್ಲ ತರಗತಿಗಳೂ ಆನ್‌ಲೈನ್ ಮೂಲಕ ನಡೆಸಲು ನಿರ್ಧರಿಸಲಾಗಿದೆ ಎಂದರು.
ಮುಂದಿನ ಶುಕ್ರವಾರದಿಂದ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತದೆ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ವೀಕೆಂಡ್ ಕರ್ಫ್ಯೂ ವೇಳೆ ತರಕಾರಿ, ದಿನಸಿ, ಮಾಂಸದ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗಳಿಗೆ ಮಾತ್ರ ಅನುಮತಿ. ಕೋವಿಡ್ 2 ಲಸಿಕೆ ಹಾಕಿದವರಿಗೆ ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.
ಎಲ್ಲಾ ಪಬ್, ಬಾರ್, ಜಿಮ್ ಥಿಯೇಟರ್‌ಗಳಿಗೆ 50:50 ರೂಲ್ಸ್ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಸಭೆ ಸಮಾರಂಭಗಳಿಗೆ 200 ಮಂದಿಗೆ ಗಷ್ಟೇ ಅವಕಾಶ ನೀಡಲಾಗಿದ್ದು, ಮದುವೆ ಹೋರಾಂಗಣದಲ್ಲಿ 200 ಜನರಿಗೆ ಮತ್ತು ಒಳಾಂಗಣ ಕಾರ್ಯಕ್ರಮಕ್ಕೆ 100 ಮಂದಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.