Connect with us

    LATEST NEWS

    ವಿಕೇಂಡ್ ಕರ್ಪ್ಯೂವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ – ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

    ಮಂಗಳೂರು, ಜೂನ್ 24:- ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕಫ್ರ್ಯೂನಲ್ಲಿ ಸಂಪೂರ್ಣ ಲಾಕ್‍ಡೌನ್ ಇದ್ದು ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು.
    ಅವರು ಇಂದು ತಮ್ಮ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ತಾಲೂಕುಗಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್ ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ಕೊರೋನಾ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಹಾಲಿನ ವಿತರಣಾ ಕೇಂದ್ರಗಳು, ಆಸ್ಪತ್ರೆ, ಸರ್ಕಾರಿ ಕೆಲವು ಕಛೇರಿಗಳು ಮಾತ್ರತೆರೆಯಲು ಅವಕಾಶವಿದ್ದು, ಇತರೆ ಯಾವುದೇ ಚಟುವಟಿಕೆಗಳು ಇರುವುದಿಲ್ಲ. ವಾರಾಂತ್ಯದಲ್ಲಿ ಸರಕಾರಿ ಕಛೇರಿಗಳು ರಜೆ ಇರುವುದರಿಂದ ಜನರು ಅನಾವಶ್ಯಕವಾಗಿ ಓಡಾಡುವುದು ಅವಶ್ಯವಿರುವುದಿಲ್ಲ. ಸಂಪೂರ್ಣ ಬಂದ್ ಮಾಡುವುದರಿಂದ ಕೊರೋನ ಹರಡುವಿಕೆ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಸಾದ್ಯ ಎಂದರು.


    ಸರಕಾರಿ ಸೇರಿದಂತೆ ಇತರೆ ಖಾಸಗಿ ಕಟ್ಡಡ ಕಾಮಗಾರಿಗಳಿಗೆ ನಿರಂತರ ಚಲನೆಯಲ್ಲಿರುವ ಕಾರ್ಖಾನೆಗಳಿಗೆ, ಹೊಟೇಲ್‍ಗಳಲ್ಲಿ ಪಾರ್ಸೆಲ್ ಕೊಡಲು ಮಾತ್ರ ಅವಕಾಶವಿರುತ್ತದೆ. ಪೂರ್ವ ನಿಗಧಿತ ಅನುಮತಿ ಪಡೆದ ಮದುವೆ ಮತ್ತಿತರ ಸಮಾರಂಭಗಳಿಗೆ 25 ಜನರಿಗೆ ಸೀಮಿತಗೊಳಿಸಿ ಮನೆಗಳಲ್ಲಿಯೇ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.


    ಕ್ಲಿನಿಕ್‍ಗಳಲ್ಲಿ ಕೆಮ್ಮು, ಶೀತ, ಜ್ವರ ಬಂದವರಿಗೆ ಚಿಕಿತ್ಸೆಯನ್ನು ವೈದ್ಯರುಗಳು ನೀಡುತ್ತಿದ್ದಾರೆ. ಅಂತಹ ರೋಗಿಗಳ ಕೋವಿಡ್ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದ ಅವರು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ವರ್ಗದವರು, ಕೊರೋನ ಪೂರ್ಣ ಪ್ರಮಾಣವಾಗಿ ಮುಕ್ತವಾಗಿದೆ ಎಂಬ ಮನೋಭಾವವನ್ನು ಹೊಂದಬಾರದು. ಸ್ಥಳೀಯವಾಗಿ ಸೋಂಕಿತರನ್ನು ತಮ್ಮ ಮನೆಯವರಿಗೆ ತೆಗೆದುಕೊಳ್ಳುವಷ್ಟು ಕಾಳಜಿಯನ್ನು ಅವರಿಗೂ ತೆಗೆದುಕೊಳ್ಳಬೇಕು, ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ವರ್ಗಾಹಿಸಬೇಕು ಎಂದರು.

    ಸರ್ಕಾರದಿಂದ ಬರುವ ಕೊರೋನ ನಿರೋಧಕ ಚುಚ್ಚು ಮದ್ದುಗಳ ದಾಸ್ತಾನನ್ನು ಅಂದೇ ಪೂರ್ಣ ಪ್ರಮಾಣದಲ್ಲಿ ನೀಡಲು ಯೋಜನೆಯನ್ನು ರೂಪಿಸುವುದರೊಂದಿಗೆ ಜನರಿಗೆ ನೀಡುವ ಕೆಲಸವಾಗಬೇಕು. ಈ ಕಾರ್ಯಕ್ಕೆ ನಿವೃತ್ತ ವೈದ್ಯರುಗಳನ್ನು ಬಳಸಿಕೊಳ್ಳುವುದು ಸೂಕ್ತ ಎಂದರು.

    3ನೇ ಅಲೆಯಲ್ಲಿ ಮಕ್ಕಳನ್ನು ಸೋಂಕು ಬಾಧಿಸುವ ಸಂಭವವಿದೆ ಎಂಬುದರ ಬಗ್ಗೆ ಕೇಳಿ ಬರುತ್ತಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಅವರು ಅಂಗಡಿ ಮುಗ್ಗಟ್ಟುಗಳಲ್ಲಿ ಮಕ್ಕಳು ಇರದೇ ಇರುವ ರೀತಿ ಮಾಲೀಕರು ನೋಡಿಕೊಳ್ಳಬೇಕು. ಒಂದೊಮ್ಮೆಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ದಂಢ ವಿಧಿಸಲಾಗುವುದು ಎಂದರು.

    ಉಪವಿಭಾಗ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕೊರೋನಾ ನಿಯಂತ್ರಣಾ ಕ್ರಮಗಳ ಬಗ್ಗೆ ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದುಅವರು ತಹಶಿಲ್ದಾರುಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿದಿನ ತಮ್ಮ ಕೆಳಗಿನ ಅಧಿಕಾರಿ ಸಿಬ್ಬಂದಿಗಳೊಂದಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆಯಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಡಾ.ಕುಮಾರ್ ಮಾತನಾಡಿ, ತಾಲೂಕುಗಳಿಗೆ ಪ್ರತಿದಿನ ನಿಗದಿ ಪಡಿಸಿರುವ ಕೋವಿಡ್ ಪರೀಕ್ಷೆಯ ಗುರಿಯನ್ನು ಸಾಧಿಸಬೇಕು. ಜಿಲ್ಲೆಯಲ್ಲಿ ಸುಳ್ಯ ತಾಲೂಕನ್ನು ಹೊರತುಪಡಿಸಿದರೆ ಇತರ ತಾಲೂಕುಗಳಲ್ಲಿ ನಿಗಧಿತ ಗುರಿ ಮುಟ್ಟುತ್ತಿಲ್ಲ ಹೀಗಾಗದಂತೆ ಮುಂದಿನ ದಿನಗಳಲ್ಲಿ ನೋಡಿಕೊಳ್ಳಬೇಕು ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *