Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಗೆ ಮತ್ತೆ ವಿಕೇಂಡ್ ಲಾಕ್ ಡೌನ್.. ನಾಳೆಯಿಂದಲೇ ಜಾರಿ

    ಮಂಗಳೂರು ಅಗಸ್ಟ್ 06: ಕೊರೊನಾ ಪ್ರಕರಣ ಏರಿಕೆಯಾಗಿರುವ ಹಿನ್ನಲೆ ಗಡಿಭಾಗದ ಜಿಲ್ಲೆಗಳಲ್ಲಿ ವಿಕೇಂಡ್ ಕರ್ಪ್ಯೂ ಹಾಗೂ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ನೈಟ್‌ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


    ಇಂದಿನಿಂದಲೇ ರಾಜ್ಯದಾದ್ಯಂತ ಈಗಿರುವ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಮತ್ತು ಕೋವಿಡ್ ಪ್ರಕರಣಗಳು ಹೆಚ್ಚಿರುವ ಮಹಾರಾಷ್ಟ್ರ ಮತ್ತು ಕೇರಳದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್ ಜಾರಿಗೆ ಬರಲಿದೆ

    ಈ ಬಗ್ಗೆ ಕೊರೊನಾ ನಿರ್ವಹಣೆ ಕುರಿತಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ನಿಯಂತ್ರಣ ಕುರಿತು ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು,’ ಶುಕ್ರವಾರದಿಂದಲೇ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್‌ಡೌನ್ ಜಾರಿಯಾಗಲಿದೆ’ ಎಂದರು. ರಾತ್ರಿ ಕರ್ಫ್ಯೂ ಅವಧಿ ಪರಿಷ್ಕರಿಸಲಾಗಿದೆ. ರಾಜ್ಯದಾದ್ಯಂತ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದ

    Share Information
    Advertisement
    Click to comment

    You must be logged in to post a comment Login

    Leave a Reply