Connect with us

    LATEST NEWS

    ನವಭಾರತ್ ಸರ್ಕಲ್ ನ ಅಡಿಯಲ್ಲಿ ಹಳೆಯ ಬಾವಿ ಪತ್ತೆ…..!!

    ಮಂಗಳೂರು ಜೂನ್ 12: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನಲೆ ನೆಲಸಮ ಮಾಡಿರುವ ನವಭಾರತ್ ಸರ್ಕಲ್ ನಲ್ಲಿ ಹಳೆಯ ಬಾವಿಯೊಂದು ಪತ್ತೆಯಾಗಿದೆ.


    ಮಂಗಳೂರಿನ ಹೃದಯ ಭಾಗದಲ್ಲಿರುವ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ನಿನ್ನೆ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ಸಂದರ್ಭ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ.

    ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ ಮೂಡಿಸಿದೆ.
    ಈ ಹಿಂದೆ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ಹಂಪನಕಟ್ಟೆಯಲ್ಲಿಯೂ ನೂರಾರು ವರ್ಷ ಹಳೆಯದಾದ ಬಾವಿ ಪತ್ತೆಯಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply