LATEST NEWS
ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ದೊರೆ ಸ್ವಾಗತಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ ಫೆಬ್ರವರಿ 17: ಭಾರತದ ಭೇಟಿ ಗೆ ಆಗಮಿಸಿರುವ ಕತಾರ್ ದೊರೆ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಸ್ವಾಗತಿಸಿದರು.
ಕತರ್ ಅಮೀರ್ ಇಂದು ರಾತ್ರಿ 8:30ರ ಸುಮಾರಿಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಕತಾರ್ ದೊರೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದು, ಮಂಗಳವಾರ ) ಪ್ರಧಾನಿ ಮೋದಿ ಅವರೊಂದಿಗೆ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ.

ಇದು ಖತರ್ ಅಮೀರ್ ಅವರ ಎರಡನೇ ಭೇಟಿಯಾಗಿದೆ. ಅವರು ಈ ಹಿಂದೆ ಮಾರ್ಚ್ 2015 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು ಎಂದು ವಿದೇಶಾಂಗ ಸಚಿವಾಲಯ ಈ ಹಿಂದೆ ತಿಳಿಸಿದೆ. ಭಾರತ ಮತ್ತು ಖತರ್ ಆಳವಾದ ಐತಿಹಾಸಿಕ ಸಂಬಂಧಗಳನ್ನು ಹೊಂದಿವೆ. ಇತ್ತೀಚಿನ ವರ್ಷಗಳಲ್ಲಿ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಸೇರಿದಂತೆ ಎರಡೂ ದೇಶಗಳ ನಡುವಿನ ಸಂಬಂಧಗಳು ಬಲಗೊಳ್ಳುತ್ತಲೇ ಇವೆ.