Connect with us

FILM

ದಿ ಕೇರಳ ಸ್ಟೋರಿ ಚಿತ್ರಕ್ಕೆ ಪಶ್ಚಿಮಬಂಗಾಳದಲ್ಲಿ ನಿಷೇಧ….!!

ಕೊಲ್ಕತ್ತಾ ಮೇ 09: ತಮಿಳುನಾಡು ಸರಕಾರ ದಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧ ಹೇರಿದ ಬೆನ್ನಲ್ಲೆ ಇದೀಗ ಪಶ್ಚಿಮ ಬಂಗಾಳದಲ್ಲೂ ಚಿತ್ರವನ್ನು ನಿಷೇಧಿಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿವಾದಾತ್ಮಕ ಚಿತ್ರದ ಪದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶ ಹೊರಡಿಸಿದ್ದರು. ದಿದಿ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.


ದಿ ಕೇರಳ ಸ್ಟೋರಿ ಚಿತ್ರ ಬಿಡುಗಡೆಯಾದ ಬಹುತೇಕ ಕಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಮಧ್ಯ ಪ್ರದೇಶ ಉತ್ತರ ಪ್ರದೇಶ ಸರಕಾರ ಸೇರಿದಂತೆ ಹಲವು ರಾಜ್ಯಗಳು ತೆರಿಗೆ ವಿನಾಯತಿಯನ್ನೂ ಘೋಷಣೆ ಮಾಡಿವೆ. ಈ ನಡುವೆ ತಮಿಳುನಾಡು ಸರಕಾರ ಕೇರಳ ಸ್ಟೋರಿ ಚಿತ್ರವನ್ನು ಬ್ಯಾನ್ ಮಾಡಿದ್ದು, ಇದೀಗ ಪಶ್ಚಿಮ ಬಂಗಾಳ ಸರಕಾರ ಕೂಡ ಚಿತ್ರಕ್ಕೆ ನಿಷೇಧ ಹೇರಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *