Connect with us

    LATEST NEWS

    ಪಶ್ಚಿಮ ಘಾಟ್ ನಲ್ಲಿ ಜಲಸ್ಪೋಟ ರೀತಿ ಮಳೆ ಉಕ್ಕಿಹರಿಯುತ್ತಿರುವ ಮೃತ್ಯುಂಜಯ ಹೊಳೆ

    ಪಶ್ಚಿಮ ಘಾಟ್ ನಲ್ಲಿ ಜಲಸ್ಪೋಟ ರೀತಿ ಮಳೆ ಉಕ್ಕಿಹರಿಯುತ್ತಿರುವ ಮೃತ್ಯುಂಜಯ ಹೊಳೆ

    ಮಂಗಳೂರು ಸೆಪ್ಟಂಬರ್ 3: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆ ಮುಂದುವರೆದಿದ್ದು, ಹಠಾತ್ತನೆ ಮೇಘ ಸ್ಫೋಟದ ರೀತಿಯಲ್ಲಿ ಮಳೆಯಾಗಿ ಘಟ್ಟಗಳ ಮಧ್ಯೆ ಜಲಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ.

    ಕಳೆದ 2 ದಿನಗಳಿಂದ ಸುಬ್ರಹ್ಮಣ್ಯ, ಚಾರ್ಮಾಡಿ,ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿದ್ದು, ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆರಾಯ ಪ್ರತಾಪ ತೋರುತ್ತಲೇ ಇದ್ದಾನೆ. ಈ ನಡುವೆ ಚಾರ್ಮಾಡಿ ಬಳಿಯ ಮೃತ್ಯುಂಜಯ ಹೊಳೆ ಇದ್ದಕ್ಕಿದ್ದಂತೆ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಭಯಭೀತರಾಗಿ ಸುರಕ್ಷಿತ ಸ್ಥಳಕ್ಕೆ ತೆರಳಿ ರಾತ್ರಿ ಕಳೆದಿದ್ದಾರೆ.

    ಇದ್ದಕ್ಕಿದ್ದ ಹಾಗೆ ಮೃತ್ಯುಂಜಯ ಹೊಳೆಯಲ್ಲಿ ಪ್ರವಾಹ ಬರಲು ಪಶ್ಚಿಮಘಟ್ಟದಲ್ಲಿ ಹಠಾತ್ತನೆ ಮೇಘ ಸ್ಫೋಟದ ರೀತಿಯಲ್ಲಿ ಮಳೆಯಾಗಿ ಘಟ್ಟಗಳ ಮಧ್ಯೆ ಜಲಸ್ಫೋಟ ಸಂಭವಿಸುತ್ತಿರುವ ಕಾರಣ ಎಂದು ಹೇಳಲಾಗಿದ್ದು, ಪಶ್ಚಿಮ ಘಟ್ಟದ ದಟ್ಟಾರಣ್ಯ ಬೆಟ್ಟಗಳ ನಡುವೆ ಸ್ಫೋಟ ಉಂಟಾಗುತ್ತಿದ್ದು, ಕಲ್ಲು, ಮಣ್ಣು, ಭಾರೀ ಪ್ರಮಾಣದ ಮರಗಳು ಛಿದ್ರಗೊಂಡು ನೀರಿನೊಂದಿಗೆ ಕೊಚ್ಚಿ ಬರುತ್ತಿದೆ.

    ಇದ್ದಕ್ಕಿದ್ದ ಹಾಗೆ ನೇತ್ರಾವತಿಯ ಉಪನದಿಗಳು ಹೀಗೆ ವಿಚಿತ್ರವಾಗಿ ಅಬ್ಬರಿಸುತ್ತಿರುವುದು ಘಟ್ಟದ ತಪ್ಪಲಿನ ಗ್ರಾಮಸ್ಥರಲ್ಲಿ ಭೀತಿ ಸೃಷ್ಟಿಸಿದೆ. ಇತಿಹಾಸದಲ್ಲಿ ಎಂದೂ ಕಂಡರಿಯದ ಆತಂಕಕಾರಿ ಘಟನೆಗಳು ಘಟ್ಟಗಳಲ್ಲಿ ಸಂಭವಿಸುತ್ತಿರುವುದು ಆತಂಕ ಸೃಷ್ಟಿಸಿದೆ. ಈ ವೈಪರೀತ್ಯದ ಪರಿಣಾಮ ಚಾರ್ಮಾಡಿಯಲ್ಲಿ ಒಂದಾಗಿ ಹರಿಯುತಿದ್ದ ಅಣಿಯೂರು ಹೊಳೆ ಹೊಸ್ಮಠ ಎಂಬಲ್ಲಿ ಎರಡು ಕವಲುಗಳಾಗಿ ಬೇರ್ಪಟ್ಟಿದೆ. ಭಾರೀ ಪ್ರಮಾಣದ ನೀರಿನೊಂದಿಗೆ ಕಲ್ಲುಗಳು ಹಾಗೂ ಮರದ ಅವಶೇಷಗಳು ಕೊಚ್ಚಿ ಬಂದು ನದಿ ಮಧ್ಯೆ ನಡುಗಡ್ಡೆ ಸೃಷ್ಟಿಯಾಗಿದೆ.

    ಕೃಷಿ ತೋಟಗಳಿದ್ದ ಜಾಗದಲ್ಲಿ ಹೊಸ ಹೊಳೆಯೇ ಸೃಷ್ಟಿಯಾಗಿದೆ. ಅಲ್ಲಿಂದ ನೋಡಿದರೆ, ಘಟ್ಟದ ಮೇಲ್ಭಾಗದಲ್ಲಿ ಬೆಟ್ಟಗಳ ಮಧ್ಯೆ ಬೃಹತ್ತಾಗಿ ಬಿರುಕು ಬಿಟ್ಟು ಅರಣ್ಯ ನಾಶವಾಗಿರುವುದೂ ಕಂಡುಬರುತ್ತಿದೆ. ಇದರಿಂದ ಸ್ಥಳೀಯರು ಭಯಗೊಂಡಿದ್ದು ಸ್ಥಳಾಂತರಗೊಳ್ಳುತ್ತಿದ್ದಾರೆ.

    VIDEO

    Share Information
    Advertisement
    Click to comment

    Leave a Reply

    Your email address will not be published. Required fields are marked *