KARNATAKA
ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಿಷ್ಟು..!
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಪೊಲೀಸ್ ಕಮಿಷನರ್ ಬಳಿ ಕಳಿಸಿಕೊಟ್ಟೆ. ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
You must be logged in to post a comment Login