KARNATAKA
ಏನ್ ಗುರು ಇದು..!! ಶಾಲಾ ಪ್ರವಾಸದಲ್ಲಿ ವಿದ್ಯಾರ್ಥಿಯೊಂದಿಗೆ ಶಿಕ್ಷಕಿಯ ಕಿಸ್ಸಿಂಗ್ – ಹಿಸ್ಸಿಂಗ್ ವೈರಲ್

ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯೊಂದಿಗೆ ಮುದ್ದಾಡಿ, ರೊಮ್ಯಾಟಿಕ್ ಆಗಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದ ಘಟನೆಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಂಭವಿಸಿದೆ.
ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು ಆ ಪೋಟೋಗಳು ಸೋರಿಕೆಯಾಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ಶಾಲೆಯ ಮುಖ್ಯ ಶಿಕ್ಷಕಿ ಪುಪ್ಪಲತಾ ಈ ರೀತಿ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾಳೆ. ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ.

ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ. ಅಲ್ಲದೇ ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ದ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆಯ ಬಗ್ಗೆ ಶಾಲೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದು ತನಿಖೆಗೆ ಆದೇಶಿಸಲಾಗಿದೆ