LATEST NEWS
ತಲ್ವಾರ್ ಹಿಡಿದ ಬೈಕ್ ಸವಾರರ ಪೋಟೋ ವೈರಲ್ – ಸುಳ್ಳು ಸುದ್ದಿ ಹರಡಿಸಿದವರ ವಿರುದ್ದ ಪ್ರಕರಣ

ಮಂಗಳೂರು ಜೂನ್ 07: ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ.
ಇಬ್ಬರು ಯುವಕರು ಮೂಡಬಿದ್ರೆಗೆ ಹೋಗುತ್ತಿದ್ದಾಗ ಹಿಂಬದಿಯ ಸವಾರ ತನ್ನ ಕೈಯಲ್ಲಿ ಆಕ್ವೇರಿಯಂ ಕಲ್ಲು ಮತ್ತು ಇ-ಸಿಗರೇಟ್ ಹಿಡಿದುಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸದ್ದಾರೆ.
