Connect with us

    BANTWAL

    ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ- ಇಬ್ಬರಿಗೆ ಗಾಯ

    ವಿಟ್ಲ, ಮೇ 14: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ.

    ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ ಕಾರು ಹಿಂಬದಿಗೆ ಢಿಕ್ಕಿ ಹೊಡೆದಿದೆ. ಅದರ ಪರಿಣಾಮ ಆಲ್ಟೋ ಕಾರಿನಲ್ಲಿ ಇದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ಬಂಟ್ವಾಳ ಸಮೀಪದ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply