ಮುಂಬೈ ಸೆಪ್ಟೆಂಬರ್ 04: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಪಾರ್ಟಿಗೆ ಕರೆಸಿ ಆಕೆಯ ಮೇಲೆ ಬಾತ್ ರೂಮ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಿರುತೆರೆ ನಟ ಆಶಿಶ್ ಕಪೂರ್ ಅವರನ್ನು ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.


ಇನ್‌ಸ್ಟಾಗ್ರಾಮ್ ಮೂಲಕ ಕಪೂರ್ ಆ ಮಹಿಳೆಯ ಸಂಪರ್ಕಕ್ಕೆ ಬಂದು ನಂತರ ಸ್ನೇಹಿತನ ಮನೆಯಲ್ಲಿ ನಡೆದ ಪಾರ್ಟಿಗೆ ಆಹ್ವಾನಿಸಿದ್ದ, ಅಲ್ಲಿಯೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯವನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ, ಆದರೆ ಪೊಲೀಸರು ಅಂತಹ ಯಾವುದೇ ದೃಶ್ಯಗಳನ್ನು ವಶಪಡಿಸಿಕೊಂಡಿಲ್ಲ. ಘಟನೆಯ ನಂತರ, ಕಪೂರ್ ಅವರ ಸ್ನೇಹಿತನ ಪತ್ನಿ ಶೌಚಾಲಯದ ಹೊರಗೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ವಾಶ್‌ರೂಮ್‌ನಿಂದ ಹೊರಬಂದ ಬಳಿಕ ಕಪೂರ್‌ನ ಸ್ನೇಹಿತನ ಪತ್ನಿ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ. ಪೊಲೀಸ್ ಕಂಟ್ರೋಲ್ ರೂಮ್‌ಗೆ (PCR) ಕರೆ ಮಾಡಿದ್ದು ಈ ಸ್ನೇಹಿತನ ಪತ್ನಿಯೇ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ಮುಂದುವರಿದಿದ್ದು, ಕಪೂರ್‌ನನ್ನು ವಿಚಾರಣೆಗೊಳಪಡಿಸಲಾಗಿದೆ. ಸಂತ್ರಸ್ತೆಯ ಆರೋಗ್ಯ ಪರೀಕ್ಷೆಗಾಗಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Share Information