Connect with us

BELTHANGADI

ಪತ್ನಿ ಸಾವನ್ನಪ್ಪಿದ ಕೆಲವೇ ಗಂಟೆಯಲ್ಲಿ ಪತಿ ಮೃತ್ಯು

ಬೆಳ್ತಂಗಡಿ ಜೂನ್ 24 : ಕೊರೊನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಪತಿ ಪತ್ನಿ ಇಬ್ಬರೂ 24 ಗಂಟೆಗಳ ಅಂತರದಲ್ಲಿ ಮೃತಪಟ್ಟಿರುವ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ.


ಮತರನ್ನು ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ (58) ಹಾಗೂ ಅವರ ಪತಿ ಇಬ್ರಾಹಿಂ (68) ಎಂದು ಗುರುತಿಸಲಾಗಿದೆ. ಗಂಡ ಹೆಂಡತಿ ಇಬ್ಬರಿಗೂ ಜೂನ್ 19ರಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸಾರಮ್ಮ ಅವರನ್ನು ಮೊದಲು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದ್ದು, ಬಳಿಕ ಪತಿ ಇಬ್ರಾಹಿಂ ಹೃದಯ ಸಂಬಂಧಿ ಕಾಯಿಲೆ ತೀವ್ರಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಸಾರಮ್ಮ ವೆನ್ಲಾಕ್‌ ಆಸ್ಪತ್ರೆಯಲ್ಲಿ ಜೂನ್ 22ರಂದು ಮೃತಪಟ್ಟರೆ, ಅವರ ಪತಿ ಇಬ್ರಾಹಿಂ (68) ಜೂನ್ 23ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರಿಬ್ಬರ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.