LATEST NEWS
ಹೆಂಡತಿಗೆ ಸರಿಯಾಗಿ ಸೀರೆ ಉಡೋಕೆ, ಮಾತನಾಡೋಕೆ ಬರಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ!
ಔರಂಗಾಬಾದ್, ಮೇ 18: ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ 24 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಸರಿಯಾಗಿ ಸೀರೆ ಉಡಲು ಮತ್ತು ಮಾತನಾಡಲು ಬರಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ವರದಿಯಾಗಿದೆ.
ಮುಕುಂದನಗರದ ನಿವಾಸಿ ಸಮಾಧಾನ್ ಸಾಬಲ್ ಸೋಮವಾರ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಕುಂದವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತನ ಕೊಠಡಿಯಿಂದ ಡೆತ್ ನೋಟ್ ವಶಪಡಿಸಿಕೊಂಡಿದ್ದು, ಅದರಲ್ಲಿ ತನ್ನ ಹೆಂಡತಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ, ಸರಿಯಾಗಿ ನಡೆಯಲು, ಮಾತನಾಡಲು ಬರುವುದಿಲ್ಲ ಎಂದು ಉಲ್ಲೇಖಿಸಿದ್ದಾನೆ ಎಂದು ಮುಕುಂದವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹೇಳಿದ್ದಾರೆ.
ಈ ವ್ಯಕ್ತಿ ಆರು ತಿಂಗಳ ಹಿಂದೆ ತನಗಿಂತ ವಯಸ್ಸಿನಲ್ಲಿ 6 ವರ್ಷ ಹಿರಿಯಳಾದ ಮಹಿಳೆಯನ್ನು ಮದುವೆಯಾಗಿದ್ದ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.